ಆಪ್ತ ಸಮಾಲೋಚಕರ ಹುದ್ದೆ: ಅರ್ಜಿ ಆಹ್ವಾನ
Update: 2023-09-14 19:22 IST
ಉಡುಪಿ, ಸೆ.14: ಜಿಲ್ಲೆಯ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಖಾಲಿ ಇರುವ ಆಪ್ತ ಸಮಾಲೋಚಕರ 1 ಹುದ್ದೆಗೆ (ಎಂಎಸ್‌ಡಬ್ಲ್ಯೂ) ಗೌರವಧನದ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯ ವಾಣಿ ಕೇಂದ್ರ, ಪೋಲಿಸ್ ವರಿಷ್ಠಾಧಿಕಾರಿಗಳ ಕಚೇರಿ ಬಳಿ, ಬನ್ನಂಜೆ, ಉಡುಪಿ ದೂ.ಸಂ. 0820-2526394 ಅನ್ನು ಸಂಪರ್ಕಿಸಬಹುದು ಎಂದು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಯೋಜನಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.