×
Ad

ಮನೋವೈದ್ಯರ ಹುದ್ದೆ: ನೇರ ಸಂದರ್ಶನ

Update: 2023-07-28 21:28 IST

ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ -ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಮನೋವೈದ್ಯರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆಗಸ್ಟ್ 5 ರಂದು ಬೆಳಗ್ಗೆ 10:30ಕ್ಕೆ ನಗರದ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News