×
Ad

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ತರಬೇತಿ ಕಾರ್ಯಗಾರ

Update: 2026-01-01 18:57 IST

ಬೈಂದೂರು, ಜ.1: ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರ, ಸಮೃದ್ಧ ಬೈಂದೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು, ಲಯನ್ಸ್ ಕ್ಲಬ್ ಉಪ್ಪುಂದ, ಜೋಗಿ ಮನೆ ಟ್ರಸ್ಟ್ ಹಳೆಗೇರಿ, ಸರಕಾರಿ ಪ್ರೌಢ ಶಾಲೆ ಕಿರಿಮಂಜೇಶ್ವರ ಇವುಗಳ ಸಹಯೋಗದೊಂದಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ತರಬೇತಿ ಕಾರ್ಯಗಾರ ‘ಪ್ರೇರಣಾ -2025’ ಕಾರ್ಯಕ್ರಮವನ್ನು ಕಿರಿಮಂಜೇಶ್ವರ ಸರಕಾರಿ ಪ್ರೌಢಶಾಲೆ ಯಲ್ಲಿ ಇತ್ತೀಚಿಗೆ ಆಯೋಜಿಸಲಾಗಿತ್ತು.

ಅಧ್ಯಕ್ಷತೆಯನ್ನು ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಖಾರ್ವಿ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಅನಿತಾ ಎಂ., ಜೋಗಿ ಮನೆ ಟ್ರಸ್ಟ್‌ನ ವಸಂತ ಜೋಗಿ, ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರ ಅಧ್ಯಕ್ಷ ಅಬ್ದುಲ್ ಮುನಾಫ್, ಸೀನಿಯರ್ ಚೇಂಬರ್‌ನ ರಾಷ್ಟ್ರೀಯ ನಿರ್ದೇಶಕೆ ಹುಸೇನ್ ಹೈಕಾಡಿ, ಎಸ್‌ಡಿಎಂಸಿ ಅಧ್ಯಕ್ಷ ಭಾಸ್ಕರ್ ಖಾರ್ವಿ, ರಾಘವೇಂದ್ರ ಕುಲಾಲ್ ಹೆಮ್ಮಾಡಿ, ಲಯನ್ಸ್ ಸುಂದರ ಕೋಟಾರಿ, ರಹಿಮಾನ್, ಕರಾಮಾತುಲ್ಲ, ಮಂಜುನಾಥ್ ನಾಯಕ್, ಸಂಪನ್ಮೂಲ ವ್ಯಕ್ತಿಯಾಗಿ ಸರೋಜ ಉಪಸ್ಥಿತರಿದ್ದರು.

ಅಕಾಡೆಮಿ ಆಫ್ ಪರ್ಸನಾಲಿಟಿ ಎಕ್ಸೆಲೆನ್ಸ್ ತರಬೇತುದಾರ ಕೆ.ಕೆ. ಶಿವರಾಮ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಮುಖ್ಯ ಶಿಕ್ಷಕ ಮಂಜು ಎಂ.ಪೂಜಾರಿ ಸ್ವಾಗತಿಸಿ ವಂದಿಸಿದರು, ಸುಮಾ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News