×
Ad

ಬಳ್ಳಾರಿ ಆಸ್ಪತ್ರೆಯಲ್ಲಿ ಗರ್ಭಿಣಿಯರ ಸಾವು ಪ್ರಕರಣ; ಇಂದು ಸಿಎಂ ನೇತೃತ್ವದಲ್ಲಿ ಸಭೆ: ಸಚಿವೆ ಹೆಬ್ಬಾಳ್ಕರ್

Update: 2024-11-30 11:17 IST

ಉಡುಪಿ, ನ.30: ಬಳ್ಳಾರಿ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಲ್ಲಿ ಸಂಭವಿಸಿದ ಗರ್ಭಿಣಿಯರ ಸಾವು ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಈ ವಿಷಯದ ಕುರಿತು ಇಂದು(ನ.30) ಬೆಂಗಳೂರಿನಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯೂ ಆಗಿರುವ ಹೆಬ್ಬಾಳ್ಕರ್ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದು, ಈ ವೇಳೆ ತನ್ನ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತಿದ್ದರು.

ಕಾಂಗ್ರೆಸ್ ನಲ್ಲಿ ಭಿನ್ನಮತ ಇಲ್ಲ

ಹಾಸನದಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಕೆಲವರ ಭಿನ್ನಮತದ ಕುರಿತ ವರದಿಯ ಬಗ್ಗೆ ಮಾಧ್ಯಮದವರು ಗಮನಸೆಳೆದಾಗ ಪ್ರತಿಕ್ರಿಯಿಸಿದ ಸಚಿವೆ, ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತ ಇಲ್ಲ. ಭಿನ್ನಮತ ಇರೋದು ಬಿಜೆಪಿಯಲ್ಲಿ ಮಾತ್ರ. ಬಿಜೆಪಿ ಭಿನ್ನಮತದ ಬಗ್ಗೆ ಮಾಧ್ಯಮಗಳೇ ದಿನಾ ತೋರಿಸುತ್ತಿವೆ ಎಂದು ನಗುತ್ತಾ ನುಡಿದರು.

ನಮ್ಮಲ್ಲಿ ಭಿನ್ನಮತ ಇಲ್ಲ ಅನ್ನೋದಕ್ಕೆ ಉಪಚುನಾವಣೆಯ ಫಲಿತಾಂಶವೇ ಉತ್ತರ ಎಂದೂ ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News