×
Ad

ಉಡುಪಿ ವಲಯ ಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆ

Update: 2025-08-07 18:17 IST

ಕಾಪು, ಆ.7: ಶಾಲಾ ಶಿಕ್ಷಣ ಇಲಾಖೆ ಉಡುಪಿ ವಲಯ ಮತ್ತು ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಅಧೀನ ಸಂಸ್ಥೆಯಾದ ಅಲ್-ಇಹ್ಸಾನ್ ಅಕಾಡೆಮಿ ಸ್ಕೂಲ್ ಮೂಳೂರು ಇವರ ಸಹಯೋಗದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಸುಮಾರು 2500 ವಿದ್ಯಾರ್ಥಿಗಳ ಭಾಗವಹಿಸುವಿಕೆಯೊಂದಿಗೆ ಅಕ್ಟೋಬರ್ ತಿಂಗಳಲ್ಲಿ ಅಜ್ಜರಕಾಡು ಮಹತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ಕ್ರೀಡಾಕೂಟದ ಪೂರ್ವಭಾವಿ ಸಭೆ ಇತ್ತೀಚೆಗೆ ಅಲ್-ಇಹ್ಸಾನ್ ಕಾಲೇಜು ಅಡಿಟೋರಿಯಂನಲ್ಲಿ ಜರಗಿತು.

ಸಭೆಯನ್ನು ಯುವಜನ ಸಬಲೀಕರಣ ಕಾಪು ತಾಲೂಕಿನ ಕ್ರೀಡಾಧಿಕಾರಿ ರಿತೇಶ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸಂಸ್ಥೆಯ ಅಡಳಿತಾಧಿಕಾರಿ ಪ್ರೊ.ಯೂಸುಫ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ, ದೈಹಿಕ ಶಿಕ್ಷಕರ ಸಂಘದ ಗ್ರೇಡ್-1 ಅಧ್ಯಕ್ಷ ವರದರಾಜ್, ದೈಹಿಕ ಶಿಕ್ಷಕರ ಸಂಘದ ಗ್ರೇಡ್-2 ಅಧ್ಯಕ್ಷ ಜಯಲಕ್ಷ್ಮಿ, ಉಡುಪಿ ತಾಲೂಕು ಯುವಜನ ಸಬಲೀಕರಣ ಕ್ರೀಡಾಧಿಕಾರಿ ವಸಂತ ಜೋಗಿ, ಪ್ರಾಥಮಿಕ ಸಹ ಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣ ಭಟ್ ಉಪಸ್ಥಿತರಿದ್ದರು.

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಧಿಕಾರಿ ರವೀಂದ್ರ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಪ್ರಾಂಶುಪಾಲ ಕೆ.ಎಸ್.ಹಬೀಬು ರ‌್ರಹ್ಮಾನ್ ಸ್ವಾಗತಿಸಿದರು. ಪ್ರಾಥಮಿಕ ವಿಭಾಗದ ಮುಖ್ಯೋಪಾದ್ಯಾಯಿನಿ ಸೈಯದ್ ಶಬಾನಾ ವಂದಿಸಿದರು. ಪ್ರೌಢಶಾಲಾ ವಿಭಾಗದ ಮೇಲ್ವಿಚಾರಕರ ಖಲಂದರ್ ಶಾಫಿ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಬಶೀರ್ ಎಂ., ಸದ್ದಾಂ ಹುಸೇನ್ ಮತ್ತು ಸುಮನ ಕಿಶೋರ್ ಸಹಕರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News