ಉಡುಪಿ ಜನತೆಗೆ ಪ್ರಧಾನಿ ಮೋದಿ ಕೃತಜ್ಞತೆ
Update: 2025-11-28 21:00 IST
ಉಡುಪಿ, ನ.28: ಪ್ರಧಾನಿಯಾಗಿ ಉಡುಪಿ ಶ್ರೀಕೃಷ್ಣ ಮಠಕ್ಕೆ ತಾನು ನೀಡಿದ ಪ್ರಥಮ ಭೇಟಿಯ ವೇಳೆ ಉಡುಪಿಯ ಜನತೆ ತನಗೆ ನೀಡಿದ ಆತ್ಮೀಯ ಸ್ವಾಗತಕ್ಕೆ ಕೃತಜ್ಞತೆ ಸಲ್ಲಿಸಿ ಪ್ರಧಾನಿ ನರೇಂದ್ರ ಮೋದಿ ಅವರು ‘ಎಕ್ಸ್’ನಲ್ಲಿ ಸಂದೇಶವನ್ನು ನೀಡಿದ್ದಾರೆ.
ಎಕ್ಸ್‌ನಲ್ಲಿ ಬನ್ನಂಜೆಯಿಂದ ಕಲ್ಸಂಕದವರೆಗೆ ನಡೆದ ರೋಡ್ ಶೋನ ಸುಮಾರು ಎರಡು ನಿಮಿಷಗಳ ವಿಡಿಯೋದೊಂದಿಗೆ ಅವರು ಬರೆದ ಕೃತಜ್ಞತಾ ಸಂದೇಶದಲ್ಲಿ ‘ಭಕ್ತಿ, ಕಲಿಕೆ ಮತ್ತು ಸಂಪ್ರದಾಯಕ್ಕೆ ಹೆಸರಾದ ಸ್ಥಳ ಉಡುಪಿಗೆ ಭೇಟಿ ನೀಡಿದ್ದು ಸಂತೋಷವಾಯಿತು. ಉಡುಪಿಯಲ್ಲಿ ನನಗೆ ದೊರೆತ ಸ್ವಾಗತ ಸದಾ ನೆನಪಿನಲ್ಲಿ ಉಳಿಯುತ್ತದೆ. ಜನತೆಗೆ ನನ್ನ ಕೃತಜ್ಞತೆಗಳು’ ಎಂದು ಅವರು ಪೋಸ್ಟ್ ನಲ್ಲಿ ತಿಳಿಸಿದ್ದಾರೆ.