×
Ad

ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ: ಪ್ರಸ್ತಾವನೆ ಆಹ್ವಾನ

Update: 2023-08-09 20:31 IST

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರಕಾರ ಪ್ರದಾನ ಮಾಡುವ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಕ್ರೀಡೆ, ಸಾಮಾಜಿಕ ಸೇವೆ, ವಿಜ್ಞಾನ ಮತ್ತು ತಂತ್ರ ಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮತ್ತು ನೂತನ ಅವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ ೧೮ ವರ್ಷದೊಳಗಿನ ಮಕ್ಕಳ ಪ್ರಸ್ತಾವನೆಗಳನ್ನು ವೆಬ್‌ಸೈಟ್- https://awards.gov.in- ಮೂಲಕ ಆಗಸ್ಟ್ 31ರ ಒಳಗೆ ಸಲ್ಲಿಸಬಹುದಾಗಿದೆ.

ಅರ್ಹ ಮಕ್ಕಳ ಅರ್ಜಿಗಳನ್ನು ಸ್ವತಃ ಅಥವಾ ಪೋಷಕರು, ಶಿಕ್ಷಕರು, ಅಧಿಕಾರಿಗಳು ಜೊತೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ದಂಡಾಧಿಕಾರಿಗಳು, ಪಂಚಾಯತ್‌ರಾಜ್ ಸಂಸ್ಥೆಗಳೂ ಸಹ ನಾಮ ನಿರ್ದೇಶನ ಮಾಡಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News