ಸ್ವರೂಪ ಟಿ.ಕೆ. 

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ.3ರ ಬೆಳಗ್ಗೆ 6 ಗಂಟೆಯಿಂದ ನ.7ರ ಬೆಳಗ್ಗೆ 10 ಗಂಟೆಯವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–2023ರ ಕಲಂ 163ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆಗಿರುವ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ಅನುಮತಿಯಿಲ್ಲದೆ ಸಭೆ, ಮೆರವಣಿಗೆ, ಪ್ರತಿಭಟನೆ ಹಾಗೂ ಇತರ ಸಾರ್ವಜನಿಕ ಕಾರ್ಯಕ್ರಮ ಗಳನ್ನು ನಡೆಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು, ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ತೊಡಗುವುದು, ಪ್ರಚೋದನಕಾರಿ ಭಾಷಣ ಅಥವಾ ಘೋಷಣೆಗಳನ್ನು ಕೂಗುವುದು ಹಾಗೂ ಅಪಾಯಕಾರಿ ವಸ್ತುಗಳನ್ನು ಕೊಂಡೊಯ್ಯುವುದು ಮತ್ತು ಸಂಗ್ರಹಿಸುವುದನ್ನು ನಿಷೇಧಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಈ ಆದೇಶ ಹೊರಡಿಸ ಲಾಗಿದ್ದು, ಸಾರ್ವಜನಿಕರು ಆದೇಶವನ್ನು ಪಾಲಿಸುವಂತೆ ಸೂಚಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor