×
Ad

ತುಟ್ಟಿಭತ್ಯೆ, ಕನಿಷ್ಟಕೂಲಿಗೆ ಒತ್ತಾಯಿಸಿ ಬೀಡಿ ಕಾರ್ಮಿಕರಿಂದ ಧರಣಿ

Update: 2023-08-18 21:52 IST

ಉಡುಪಿ, ಆ.18: ಕಾರ್ಮಿಕರ ಮೂರು ವರ್ಷಗಳ ಬಾಕಿ ತುಟ್ಟಿಭತ್ಯೆ ಹಾಗೂ ಕನಿಷ್ಟಕೂಲಿ ನೀಡಲು ಒತ್ತಾಯಿಸಿ ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್ ನೇತೃತ್ವದಲ್ಲಿ ಇಂದು ಉಡುಪಿಯ ಸಂತಕಟ್ಟೆಯಲ್ಲಿ ಇರುವ ಗಣೇಶ ಬೀಡಿ ಕಂಪನಿಯ ಎದುರು ಧರಣಿ ನಡೆಸಲಾಯಿತು.

ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಅಧ್ಯಕ್ಷ ಮಹಾಬಲ ಹೋಡೆಯರ ಹೋಬಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಂದರ್, ಸಿಐಟಿಯು ಉಡುಪಿ ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಖಜಾಂಚಿ ಶಶಿಧರ ಗೋಲ್ಲ, ಸಿಐಟಿಯು ಉಡುಪಿ ವಲಯ ಸಂಚಾಲಕರಾದ ಕವಿರಾಜ್. ಎಸ್, ಉಡುಪಿ ಬೀಡಿಟೋಬ್ಯಾಕೋ ಲೇಬರ್ ಯುನಿಯನ್ ಅಧ್ಯಕ್ಷ ನಳಿನಿ ಎಸ್., ಕುಂದಾಪುರ ತಾಲೂಕು ಬೀಡಿ ಕೆಲಸಗಾರರ ಸಂಘದ ಅಧ್ಯಕ್ಷೆ ಬಲ್ಕೀಸ್, ಮುಖಂಡರಾದ ಮೋಹನ್, ಡಿ.ಗಿರಿಜಾ, ರಮಣಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News