×
Ad

ಉಡುಪಿ ಕೊಲೆ ಪ್ರಕರಣದ ಆರೋಪಿಯ ಶೀಘ್ರ ಬಂಧನ: ಮಂಜುನಾಥ್ ಭಂಡಾರಿ

Update: 2023-11-14 14:09 IST

ಉಡುಪಿ, ನ.14:  ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶೀಘ್ರವೇ ಆರೋಪಿಯನ್ನು ಬಂಧಿಸುವ ಭರವಸೆಯನ್ನು ಎಸ್ಪಿನೀಡಿದ್ದಾರೆ. ತನಿಖೆಯ ವಿಚಾರ ಕೇಳುವುದು ಮತ್ತು ಹೇಳುವುದು ಸರಿಯಲ್ಲ. ಈ ಕೊಲೆಗಾರ ಮಾನವ ಕುಲಕ್ಕೆ ಕಂಟಕವಾಗಿದ್ದಾನೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದ್ದಾರೆ.

ಕೃತ್ಯ ನಡೆದ ನೇಜಾರು ಸಮೀಪದ ತೃಪ್ತಿ ಲೇಔಟ್‌ನಲ್ಲಿರುವ ಮನೆಗೆ ಇಂದು ಭೇಟಿ ನೀಡಿ ತಂದೆ ಮಗನಿಗೆ ಸಾಂತ್ವನ ಹೇಳಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುತಿದ್ದರು.

ಇಂತಹ ಘಟನೆ ಮತ್ತೊಮ್ಮೆ ಮರುಕಳಿಸಬಾರದು. ಆಡಳಿತ ವ್ಯವಸ್ಥೆಯಲ್ಲಿ ಲೋಪಗಳಿದ್ದರೆ ಅದನ್ನು ಸರಿಪಡಿಸುತ್ತೇವೆ. ಸಲಹೆ ಸೂಚನೆಗಳನ್ನು ತೆಗೆದು ಕೊಂಡು ಸರಕಾರಕ್ಕೆ ಮುಟ್ಟಿಸುತ್ತೇನೆ. ಆರೋಪಿ ಯಾರೇ ಆಗಿರಲಿ ಎಂತವನೇ ಆಗಿರಲಿ, ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಈ ಮೂಲಕ ಪೊಲೀಸರು ಸಾರ್ವಜನಿಕರಿಗೆ ಸ್ಪಷ್ಟ ಸಂದೇಶ ರವಾನಿಸಬೇಕು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಶೋಕ್ ಕುಮಾರ್ ಕೊಡವೂರು, ಜಿ.ಎ.ಬಾವಾ, ಎಂ.ಎ.ಗಫೂರ್, ಪ್ರಸಾದ್‌ರಾಜ್ ಕಾಂಚನ್, ಪ್ರಶಾಂತ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ದಿನಕರ ಹೆರೂರು ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News