ಗಣರಾಜ್ಯೋತ್ಸವ: ಮುಸ್ಲಿಮ್ ಒಕ್ಕೂಟದಿಂದ ಉಪನ್ಯಾಸ ಕಾರ್ಯಕ್ರಮ
ಕುಂದಾಪುರ, ಜ.30: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಕುಂದಾಪುರ ತಾಲೂಕು ಘಟಕದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮವನ್ನು ಗಂಗೊಳ್ಳಿಯ ಅಂಜುಮನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿತ್ತು.
ತಾಲೂಕು ಅಧ್ಯಕ್ಷ ಎಸ್.ದಸ್ತಗೀರ್ ಕಂಡ್ಲೂರು ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಬಳಿಕ ಸಾಹಿತಿಗಳು ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮುಷ್ತಾಕ್ ಹೆನ್ನಾಬೈಲ್, ಭಾರತದ ಸಂವಿಧಾನ - ಹಕ್ಕುಗಳು ಮತ್ತು ಕರ್ತವ್ಯಗಳು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ಶಾಲೆಯ ಗೌರವಾಧ್ಯಕ್ಷ ಮೌಲಾನಾ ಇಬ್ರಾಹಿಂ ಗಂಗೊಳ್ಳಿ ಹಾಗೂ ಶಾಲೆಯ ಅಧ್ಯಕ್ಷ ಮುಜಾಹಿದ್ ನಾಖುದಾ ಗಂಗೊಳ್ಳಿ ಮಾತನಾಡಿದರು. ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಜಿಲ್ಲಾಧ್ಯಕ್ಷ ಮುಹಮ್ಮದ್ ಮೌಲಾ ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಪ್ರತಿಜ್ಞೆ ಬೋಧಿಸಿದರು. ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಶಾಲೆಯ ವಿದ್ಯಾರ್ಥಿನಿಯನ್ನು ಗೌರವಿಸಲಾಯಿತು.
ಜಿಲ್ಲಾ ಹಿರಿಯ ಉಪಾಧ್ಯಕ್ಷ ಮುಹಮ್ಮದ್ ರಫೀಕ್ ಗಂಗೊಳ್ಳಿ, ಜಿಲ್ಲಾ ಕಾರ್ಯದರ್ಶಿ ಝಫ್ರುಲ್ಲಾ ಹೊಡೆ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೌಲಾನಾ ಝಮೀರ್ ಅಹ್ಮದ್ ರಶಾದಿ, ತಾಲೂಕು ಕಾರ್ಯದರ್ಶಿ ರಿಯಾಝ್ ಕೋಡಿ, ಜಿಲ್ಲಾ ಸಮಿತಿ ಸದಸ್ಯರಾದ ಮುಜಾವರ್ ಅಬು ಮೊಹಮ್ಮದ್ ಕುಂದಾಪುರ, ರೆಹಾನ್ ತ್ರಾಸಿ, ಮುನೀರ್ ಕಂಡ್ಲೂರು, ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷ ತಬ್ರೇಝ್, ಶಾಲೆಯ ಪದಾಧಿಕಾರಿಗಳು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.