×
Ad

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಹೋಟೆಲ್ ವ್ಯವಸ್ಥೆಗೆ ಕರವೇ ಮನವಿ

Update: 2023-10-14 17:43 IST

ಉಡುಪಿ: ಬನ್ನಂಜೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಹೊರಗಿನಿಂದ ತಂದ ಆಹಾರವನ್ನು ಶೌಚಾಲಯದ ಹತ್ತಿರ ಪೂರೈಸುತ್ತಿರುವುದನ್ನು ನಿಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಉಪಯೋಗಕ್ಕೆ ಎಟಿಎಂ ತೆರೆಯುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಇಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ, ಗೌರವಾಧ್ಯಕ್ಷ ಸುಂದರ್ ಎ.ಬಂಗೇರ, ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ರಾಘವೇಂದ್ರ ನಾಯಕ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಪಾಂಗಾಳ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಜಯ ಪೂಜಾರಿ, ಮುಖಂಡರಾದ ಸಂತೋಷ ಕುಲಾಲ್, ರೋಷನ್ ಬಂಗೇರ, ದೇವಕಿ ಬಾರ್ಕೂರ್, ಸಿದ್ದಣ್ಣ ಎಸ್.ಪೂಜಾರಿ, ಅನುಷಾ ಆಚಾರ್ಯ ಪಳ್ಳಿ, ಸರಿತಾ, ಕೃಷ್ಣ ಪಾಂಗಾಳ, ಜ್ಯೋತಿ, ಜ್ಯೋತಿ ಆರ್. ಚಂದ್ರಕಲಾ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News