×
Ad

ಗ್ರಾಹಕರ ಸೋಗಿನಲ್ಲಿ ಚಿನ್ನಾಭರಣ ಮಳಿಗೆಯಿಂದ ಕಳವು ಪ್ರಕರಣ: ಆರೋಪಿ ಸೆರೆ

Update: 2026-02-03 21:03 IST

ಕುಂದಾಪುರ, ಫೆ.3: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ಅಂಗಡಿಯಿಂದ ಚಿನ್ನದ ಸರವು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ ಕಜೆಕಾರ್ ಗ್ರಾಮದ ಬಡಗ ನಿವಾಸಿ ರಮೇಶ(42) ಬಂಧಿತ ಆರೋಪಿ. ಜ.27ರಂದು ಸಂಜೆ ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿಯ ಇರುವ ಎಸ್‌ಪಿಜಿ ಗೋಲ್ಡ್ ಆ್ಯಂಡ್ ಡೈಮಂಡ್ ಅಂಗಡಿಗೆ ಬಂದ ಅಪರಿಚಿತ ವ್ಯಕ್ತಿ ಚಿನ್ನವನ್ನು ತೆಗೆದುಕೊಳ್ಳುವ ನೆಪದಲ್ಲಿ ಅಂಗಡಿಯ ಕೆಲಸದವರ ಕಣ್ಣು ತಪ್ಪಿಸಿ ಸುಮಾರು 9 ಗ್ರಾಮ ತೂಕದ 125000 ರೂ. ಮೌಲ್ಯದ ಚಿನ್ನದ ಸರವನ್ನು ಕಳವು ಮಾಡಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸಿ, ಚಿನ್ನದ ಅಂಗಡಿಯಿಂದ ಕಳ್ಳತನ ಮಾಡಿದ ಚಿನ್ನದ ಚೈನ್ ಮತ್ತು ಆತನ ವಶದಲ್ಲಿದ್ದ 33000ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕುಂದಾಪುರ ಡಿವೈಎಸ್ಪಿ ಎಚ್.ಡಿ.ಕುಲಕರ್ಣಿ ಮಾರ್ಗದರ್ಶನದಂತೆ ಕುಂದಾಪುರ ಪೊಲೀಸ್ ಠಾಣಾ ನಿರೀಕ್ಷಕ ಜಯರಾಮ್ ಡಿ.ಗೌಡ ನೇತೃತ್ವದಲ್ಲಿ ಠಾಣಾ ಎಸ್ಸೈಗಳಾದ ನಂಜಾನಾಯ್ಕ್ ಎನ್., ಪುಷ್ಪ ಹಾಗೂ ಸಿಬ್ಬಂದಿ ಸಂತೋಷ, ಮಹಾಬಲ ಶೆಟ್ಟಿಗಾರ, ಪ್ರೀನ್ಸ್, ಘನಶ್ಯಾಮ್, ಸಂತೋಷ ದೇವಾಡಿಗ, ಗೌತಮ, ಲೋಹಿತ್, ಚಂದ್ರಶೆಟ್ಟಿ ಈ ಕಾರ್ಯಾಚರಣೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News