ಷೇರು ಮಾರುಕಟ್ಟೆ ಹೆಸರಿನಲ್ಲಿ 10 ಲಕ್ಷ ರೂ. ವಂಚನೆ: ಪ್ರಕರಣ ದಾಖಲು
Update: 2025-08-12 20:43 IST
ಬೈಂದೂರು, ಆ.12: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ವ್ಯಕ್ತಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚಿಸಿರುವ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿರಿಮಂಜೇಶ್ವರದ ಅಲ್ತಾಪ್ ಹುಸೇನ್(42) ಎಂಬವರ ಮೊಬೈಲ್‌ಗೆ ಜು.5ರಂದು ಲಿಂಕ್ ಬಂದಿದ್ದು, ಅದರಂತೆ ಸಂಪರ್ಕಿಸಿದ ಅಪರಿಚಿತರು, ಷೇರು ಮಾರುಕಟ್ಟೆಗೆ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ತಿಳಿಸಿದ್ದರು. ಅದನ್ನು ನಂಬಿದ ಅಲ್ತಾಫ್ ಜು.10ರಂದು 10,15,000ರೂ. ಹಣವನ್ನು ಪಾವತಿಸಿದ್ದರು. ಆದರೆ ಆರೋಪಿಗಳು ಹಣವನ್ನು ನೀಡದೆ ಮೋಸ ಮಾಡಿರುವುದಾಗಿ ದೂರಲಾಗಿದೆ.