ಆ.31ರಂದು ಗಂಗೊಳ್ಳಿ, ಕಾಪುವಿನಲ್ಲಿ ಮದ್ಯ ಮಾರಾಟ ನಿಷೇಧ
ಉಡುಪಿ, ಆ.30: ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನ ಗಂಗೊಳ್ಳಿ ಗ್ರಾಮದ ಜಯ ವಿಠಲ ದೇವಸ್ಥಾನ ಮತ್ತು ಕಲೆಕಾರ್ ಮಠ ಗಣೇಶ ವಿಸರ್ಜನೆ ಮೆರವಣಿಗೆ ಆ.31ರಂದು ಸಂಜೆ 4 ಗಂಟೆಗೆ ಹೊರಡಲಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968ರ ನಿಯಮ 3ರಡಿ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ 8 ಕಿ.ಮೀ ವ್ಯಾಪ್ತಿಯಲ್ಲಿ ಆ.31ರಂದು ಅಪರಾಹ್ನ 2 ಗಂಟೆಯಿಂದ ಮದ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ, ಮೇಲ್ಕಂಡ ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.
ಕಾಪು: ಕಾಪು ಹೊಸ ಮಾರಿಗುಡಿ ಬಳಿಯ ಶ್ರೀಕೈಲಾಸ ಮಂಟಪದ ಗಣೇಶ ವಿಗ್ರಹದ ವಿಸರ್ಜನಾ ಮೆರವಣಿಗೆ ಆ.31ರಂದು ನಡೆಯಲಿರುವ ಕಾರಣ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡಲು ಅಪರಾಹ್ನ 2 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ಕಾಪು ಪೊಲೀಸ್ ಠಾಣಾ ಸರಹದ್ದಿನ ಕಾಪು ಪಡು, ಮೂಳೂರು, ಮಜೂರು ಹಾಗೂ ಮಲ್ಲಾರು ಗ್ರಾಮ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ, ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.