ಸಾಲಿಗ್ರಾಮ ಪ.ಪಂ: ನಿಷೇಧಿತ ಪ್ಲಾಸ್ಟಿಕ್‌ಗಳ ಬಳಕೆ ಮಾಡಿದ್ದಲ್ಲಿ ಕಾನೂನು ಕ್ರಮ ಜಾರಿ
ಸಾಂದರ್ಭಿಕ ಚಿತ್ರ
ಉಡುಪಿ, ಜು.21: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪಿಯಲ್ಲಿ ಸಾರ್ವಜನಿಕರು, ಅಂಗಡಿ ಮಾಲಕರು, ಸಗಟು ಮಾರಾಟಗಾರರು, ಚಿಲ್ಲರೆ ವ್ಯಾಪಾರಿಗಳು ಮತ್ತು ಮಾರಾಟಗಾರರು ಪರಿಸರಕ್ಕೆ ಹಾನಿಯುಂಟು ಮಾಡುವಂತಹ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮತ್ತು ಮಾರಾಟ, ಸಂಗ್ರಹಣೆ, ಸಾಗಾಣಿಕೆ ಮಾಡದಂತೆ ಈಗಾಗಲೇ ಹಲವಾರು ಬಾರಿ ಮನವಿ ಮಾಡಿದ್ದರೂ, ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುತ್ತಿರುವುದು ಕಂಡುಬಂದಿದೆ.
ಪರಿಸರಕ್ಕೆ ಹಾನಿಯುಂಟು ಮಾಡುವ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ತಕ್ಷಣವೇ ನಿಲ್ಲಿಸಬೇಕು. ತಪ್ಪಿದಲ್ಲಿ ಇಂಥ ಪ್ಲಾಸ್ಟಿಕ್ ವಸ್ತುಗಳನ್ನು ಪಟ್ಟಣ ಪಂಚಾಯತ್ ವತಿಯಿಂದ ವಶಪಡಿಸಿಕೊಳ್ಳುವುದಲ್ಲದೆ ಜೊತೆಗೆ ಈ ಅಧಿಸೂಚನೆಯನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ದಂಡ ವಿಧಿಸಿ, ಉದ್ಯಮ ಪರವಾನಿಗೆ ರದ್ದುಪಡಿಸಿ ಸಂಬಂಧಪಟ್ಟ ನ್ಯಾಯಾಲಯದಲ್ಲಿ ಪರಿಸರ ಸಂರಕ್ಷಣೆ ಕಾಯ್ದೆಯಡಿ ದೂರು ದಾಖಲಿಸಲಾಗುವುದು ಎಂದು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.