×
Ad

ಸಾಲಿಗ್ರಾಮ ಪ.ಪಂ. ಅಧ್ಯಕ್ಷರಾಗಿ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷರಾಗಿ ಗಿರಿಜಾ ಪೂಜಾರಿ ಆಯ್ಕೆ

Update: 2024-08-27 19:59 IST

ಕೋಟ, ಆ.27: ಸಾಲಿಗ್ರಾಮ ಪಟ್ಟಣ ಪಂಚಾಯತ್ ಎರಡನೇ ಅವಧಿಯ ಅಧ್ಯಕ್ಷರಾಗಿ ಮಾರಿಗುಡಿ ವಾರ್ಡ್ ಬಿಜೆಪಿಯ ಸದಸ್ಯೆ ಸುಕನ್ಯಾ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಕಾರ್ಕಡ ತೆಂಕುಹೋಳಿ ವಾರ್ಡ್‌ನ ಬಿಜೆಪಿಯ ಗಿರಿಜಾ ಪೂಜಾರಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ (ಎ) ಮಹಿಳೆಗೆ ಮೀಸಲಾಗಿತ್ತು. ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷ ಸ್ಥಾನಕ್ಕೆ ಗಿರಿಜಾ ಪೂಜಾರಿ ಹಾಗೂ ಕಾಂಗ್ರೆಸ್‌ನಿಂದ ಎರಡೂ ಸ್ಥಾನಕ್ಕೆ ಝಹಿರಾ ನಾಮ ಪತ್ರ ಸಲ್ಲಿಸಿದ್ದರು. 16ಮಂದಿ ಸಂಖ್ಯಾಬಲದ ಪ.ಪಂ.ನಲ್ಲಿ ಬಿಜೆಪಿಯ 10, ಕಾಂಗ್ರೆಸ್‌ನ 5, ಪಕ್ಷೇತರ ಓರ್ವ ಸದಸ್ಯರಿದ್ದಾರೆ.

ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಶಾಸಕ ಕಿರಣ್ ಕೊಡ್ಗಿ ಮತ ದೊಂದಿಗೆ 11, ಕಾಂಗ್ರೆಸ್ ಬೆಂಬಲಿತರು 5 ಮತಗಳನ್ನು ಪಡೆದರು. ಪಕ್ಷೇತರ ಸದಸ್ಯೆ ರತ್ನಾ ನಾಗರಾಜ್ ಗಾಣಿಗ ತಟಸ್ಥವಾಗಿ ಉಳಿದರು. ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಚುನಾವವಣಾಧಿಕಾರಿಯಾಗಿ ಕಾರ್ಯ ನಿರ್ವ ಹಿಸಿದರು. ಕುಂದಾಪುರ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಮುಖ್ಯಾಧಿಕಾರಿ ಶಿವ ನಾಯ್ಕ್ ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News