×
Ad

ಸೌಜನ್ಯ ಪ್ರಕರಣ: ಮರುತನಿಖೆಗೆ ಆಗ್ರಹಿಸಿ ಮನವಿ

Update: 2023-07-25 21:33 IST

ಉಡುಪಿ, ಜು.25: ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಹಾಗೂ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ನಡೆಸಿ ಲೈಂಗಿಕ ದೌರ್ಜನ್ಯ ಎಸಗಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಭೀಮ್ ಸೇನೆ ಉಡುಪಿ ಜಿಲ್ಲಾ ಘಟಕ ನಿಯೋಗ ಜು.25ರಂದು ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

ನಿಯೋಗದಲ್ಲಿ ಘಟಕದ ಜಿಲ್ಲಾಧ್ಯಕ್ಷೆ ಸುನೀತಾ, ಜಿಲ್ಲಾ ಕಾರ್ಯದರ್ಶಿ ನವೀನ್ ಕುಮಾರ್, ಕಾರ್ಕಳ ತಾಲೂಕು ಕಾರ್ಯದರ್ಶಿ ಶಂಕರ್, ಉಪಾಧ್ಯಕ್ಷೆ ರಜನಿ, ಸದಸ್ಯರಾದ ಸುಕೇಶ್, ಸುನನೀಲ್ ಸುರೇಂದ್ರ ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News