×
Ad

ಪಟಾಕಿ ಮಾರಾಟದ ಲಾಭಾಂಶದಿಂದ ರೂ. 2.50 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣೆ

Update: 2024-11-25 14:42 IST

ಕಾರ್ಕಳ : ಅಂಬಾಭವಾನಿ ಕ್ರ್ಯಾಕರ್ಸ್ ಇವರು ದೀಪಾವಳಿ ಹಬ್ಬದ ಸಂದರ್ಭ ಗಾಂಧಿ ಮೈದಾನದಲ್ಲಿ ಪಟಾಕಿ ಮಳಿಗೆ ತೆರೆದು ಪಟಾಕಿ ಮಾರಾಟ ಮಾಡಿ ಅದರಿಂದ ಬಂದ ಲಾಭಾಂಶದಲ್ಲಿ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ.) ಮೂಲಕ ಸರ್ಕಾರಿ ಶಾಲೆಯಲ್ಲಿ ವ್ಯಾಸಾಂಗ ಮಾಡಿದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸುಮಾರು ರೂ. 2.50 ಲಕ್ಷ ಮೊತ್ತದ ವಿದ್ಯಾರ್ಥಿ ವೇತನವನ್ನು ವಿತರಿಸಿದರು.

ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆದ ಕಾರ್ಯಕಮದಲ್ಲಿ ಭುವನೇಂದ್ರ ಕಾಲೇಜು ಪ್ರಾಂಶುಪಾಲರಾದ ಮಂಜುನಾಥ್ ಕೋಟ್ಯಾನ್, ಕ್ರೈಸ್ಟ್ ಕಿಂಗ್‌ನ ಪ್ರಾಂಶುಪಾಲರಾದ ಲಕ್ಷ್ಮಿ ನಾರಾಯಣ, ಕೆಎಂಇಎಸ್ ಪ್ರಾಂಶುಪಾಲರಾದ ರಾಮಚಂದ್ರ ನೆಲ್ಲಿಕಾರು, ಹಿರಿಯರಾದ ಗಿರಿಜಾ ವಾಸು ಶೆಟ್ಟಿ, ಅಹಲ್ಯಾ ಭಟ್‌ ಹಾಗೂ ಅಮ್ಮನ ನೆರವು ಚಾರಿಟೇಬಲ್‌ ಟ್ರಸ್ಟ್‌(ರಿ.) ಸಂಸ್ಥಾಪಕರಾದ ಅವಿನಾಶ್‌ ಜಿ. ಶೆಟ್ಟಿ ದಂಪತಿ ಸಹಿತ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಚೆಕ್‌ ವಿತರಿಸಿದರು.

ಶಿಕ್ಷಕರಾದ ರಾಜೇಂದ್ರ ಭಟ್ ಕೆ. ಕಾರ್ಯಕ್ರಮ ನಿರೂಪಿಸಿದರು. ನಿವೃತ್ತ ಶಿಕ್ಷಕ ವಸಂತ್ ವಂದಿಸಿದರು.




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News