×
Ad

ಬಂಟಕಲ್: ‘ಆವಿಷ್ಕಾರ್ 2ಕೆ25’- ವಿಜ್ಞಾನ ಉತ್ಸವ ಉದ್ಘಾಟನೆ

Update: 2025-11-16 00:04 IST

ಉಡುಪಿ: ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಜ್ಞಾನ ಮತ್ತು ತಂತ್ರಜ್ಞಾನದ ಮಹತ್ವ ಅತೀ ಅಗತ್ಯ. ಯುವ ವೈಜ್ಞಾನಿಕ ಮನಸ್ಸುಗಳನ್ನು ಪೋತ್ಸಾಹಿಸುವ ಕಾರ್ಯ ಎಲ್ಲಡೆ ಆಗಬೇಕು ಎಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ತಿಳಿಸಿದ್ದಾರೆ.

ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಪದವಿಪೂರ್ವ ಮತ್ತು ಫ್ರೌಡಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಆವಿಷ್ಕಾರ್ 2ಕೆ25 ವಿಜ್ಞಾನ ಉತ್ಸವವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕೋಟ ವಿವೇಕ ಪದಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ್ ನಾವಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಲು ವಿದ್ಯಾಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಯೋಜನಾ ಅಧಿಕಾರಿ ಡಾ.ಉದಯ ಶೆಟ್ಟಿ ಮತ್ತು ಯೋಜನಾ ನಿರ್ದೇಶಕ ಜಯ್ ಕುಮಾರ್ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಸಂಸ್ಥೆಯ ಶೈಕ್ಷಣಿಕ ಡೀನ್ ಡಾ.ನಾಗರಾಜ ಭಟ್ ಸ್ವಾಗತಿಸಿದರು. ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಕಾರ್ಯಕ್ರಮದ ಸಂಯೋಜಕಿ ಡಾ.ಸುಬ್ಬುಲಕ್ಷ್ಮಿ ಎನ್.ಕಾರಂತ್ ವಂದಿಸಿದರು. ದೀಪಾ ಡಿ.ಪ್ರಭು ಮತ್ತು ಚಿರಶ್ರೀ ಕಾರ್ಯಕ್ರಮ ನಿರೂಪಿಸಿದರು.

ವಿಜ್ಞಾನ ಮಾದರಿ ಪ್ರದರ್ಶನ, ಜ್ಞಾನ ರಸಪ್ರಶ್ನೆ ಮತ್ತು ಕಿರು ವೀಡಿಯೋ ತಯಾರಿಕೆ ಸ್ಪರ್ಧೆ ಮೊದಲಾದ ಹಲವು ಸ್ಪರ್ಧೆಗಳು ನಡೆದವು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 500ಕ್ಕೂ ಹೆಚ್ಚು ಪದಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News