ಸೆ.4: ಪದ್ಮಶ್ರೀ ಮಂಜಮ್ಮ ಜೋಗತಿಯೊಂದಿಗೆ ಸಂವಾದ
Update: 2023-09-01 16:52 IST
ಮಂಜಮ್ಮ ಜೋಗತಿ
ಉಡುಪಿ, ಸೆ.1: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ, ಜಿಲ್ಲಾ ಗ್ರಂಥಾಲಯ ಮತ್ತು ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಆಶ್ರಯದಲ್ಲಿ ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ ಅವರೊಂದಿಗೆ ಸಂವಾದ ಕಾರ್ಯಕ್ರಮವನ್ನು ಸೆ.4ರಂದು ಬೆಳಗ್ಗೆ 11.30ಕ್ಕೆ ಉಡುಪಿ ಅಜ್ಜರಕಾಡಿನ ಜಿಲ್ಲಾ ಗ್ರಂಥಾಲಯದ ಎಸಿ ಸಭಾಂಗಣದಲ್ಲಿ ಆಯೋಜಿಸ ಲಾಗಿದೆ.
ಸಂವಾದದಲ್ಲಿ ಮಾಜಿ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎಲ್ ಸಾಮಗ, ಕಲಾವಿದ ಹಾಗೂ ಮೂಳೆ ರೋಗ ತಜ್ಞ ಡಾ.ಸುರೇಶ್ ಶೆಣೈ, ಕವಯತ್ರಿ ಜ್ಯೋತಿ ಮಹಾದೇವ್, ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಉಪನ್ಯಾಸಕಿ ಡಾ.ಪ್ರಜ್ಞಾ ಮಾರ್ಪಳ್ಳಿ ಭಾಗವಹಿಸಲಿರುವರು ಎಂದು ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.