×
Ad

ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

Update: 2025-12-17 21:35 IST

ಕೋಟ, ಡಿ.17: ವೈಯಕ್ತಿಕ ಕಾರಣದಿಂದ ಮನನೊಂದ ಕಾರ್ಕಡ ಗ್ರಾಮದ ಶೈಲಾ(37) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.15ರಂದು ರಾತ್ರಿ ವೇಳೆ ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ನಿದ್ರಾಹೀನತೆಯಿಂದ ಬಳಲುತ್ತಿದ್ದ ಕುಂಜಿಬೆಟ್ಟು ನಿವಾಸಿ ಸೀತಾ ನಾಯಕ್ (67) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.16ರಂದು ಸಂಜೆ ವೇಳೆ ಮನೆ ಸಮೀಪದ ಖಾಲಿ ಜಾಗದಲ್ಲಿರುವ ಪಾಳು ಬಿದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟ: ಅನಾರೋಗ್ಯದಿಂದ ಬಳಲುತ್ತಿದ್ದ ಶಿರಿಯಾರ ಗ್ರಾಮದ ಶಾರದಾ (83) ಎಂಬವರು ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.16ರಂದು ಸಂಜೆ ವೇಳೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News