ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
Update: 2025-07-29 22:17 IST
ಕುಂದಾಪುರ, ಜು.29: ಅನಾರೋಗ್ಯದಿಂದ ಬಳಲುತ್ತಿದ್ದ ಕಟ್‌ಬೇಲ್ತೂರು ಗ್ರಾಮದ ಕೃಷ್ಣ(59) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜು.29ರಂದು ಬೆಳಿಗಿನ ಜಾವ ಮನೆಯ ಹತ್ತಿರದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿರಿಯಡ್ಕ: ಮದ್ಯ ಸೇವನೆ ವಿಚಾರದಲ್ಲಿ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡ ಪೆರ್ಡೂರು ಗ್ರಾಮದ ಬುಕ್ಕಿಗುಡ್ಡೆ ದರ್ಖಾಸು ಮನೆ ನಿವಾಸಿ ಸಂತೋಷ (44) ಎಂಬವರು ಜು.28ರಂದು ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮರದ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.