×
Ad

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2026-01-06 21:38 IST

ಬ್ರಹ್ಮಾವರ, ಜ.6: ವೈಯಕ್ತಿಕ ಕಾರಣದಿಂದ ಮನನೊಂದ ಲಕ್ಷ್ಮಣ್(43) ಎಂಬವರು ಜ.4ರ ಬೆಳಗ್ಗೆಯಿಂದ ಜ.5ರ ಬೆಳಗ್ಗಿನ ಮಧ್ಯಾವದಿಯಲ್ಲಿ ಮನೆಯ ಸಮೀಪದ ಕಮಾಂಡರ್ ಸ್ಪೋರ್ಟ್ಸ್ ಕ್ಲಬ್ ಒಳಗಡೆ ಹಾಲ್‌ನಲ್ಲಿದ್ದ ಮಾಡಿನ ಕಬ್ಬಿಣದ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿರಿಯಡ್ಕ: ಅನಾರೋಗ್ಯದಿಂದ ಬಳಲುತ್ತಿದ್ದ ಕುಕ್ಕೆಹಳ್ಳಿಯ ನಾರಾಯಣ ಹಾಂಡ(73) ಎಂಬವರು ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಜ.5ರಂದು ಮಧ್ಯಾಹ್ನ ವೇಳೆ ಮನೆಯ ಟ್ಯಾರಿಸ್ ಮನೆಯ ಮೇಲಿನ ದಂಡೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News