×
Ad

ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

Update: 2026-02-01 20:37 IST

ಬೈಂದೂರು, ಫೆ.1: ವೈಯಕ್ತಿಕ ಕಾರಣದಿಂದ ಮನನೊಂದ ಉಪ್ಪುಂದ ಗ್ರಾಮದ ಕೆರೆಗಕಳಿ ನಿವಾಸಿ ಗೋವರ್ಧನ (35) ಎಂಬವರು ಫೆ.1ರಂದು ಬೆಳಗ್ಗೆ ಮನೆಯ ಕೊಠಡಿಯ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ರಿ: ಅನಾರೋಗ್ಯದಿಂದ ಬಳಲುತ್ತಿದ್ದ ಮುದ್ರಾಡಿ ನಿವಾಸಿ ಮುಕುಂದ ನಾಯ್ಕ ಎಂಬವರು ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಜ.31ರಂದು ರಾತ್ರಿ ವೇಳೆ ಮನೆಯ ಪಕ್ಕದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News