ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

Update: 2026-07-31 19:58 IST

ಬೈಂದೂರು, ಜು.31: ಅನಾರೋಗ್ಯದಿಂದ ಬಳಲುತ್ತಿದ್ದ ಹೆರಂಜಾಲಿನ ನಾರಾಯಣ ಪೂಜಾರಿ(43) ಎಂಬವರು ಜು.30ರಂದು ಮಧ್ಯಾಹ್ನ ವೇಳೆ ಮನೆಯ ಸಮೀಪದ ಹಾಡಿಯಲ್ಲಿ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ವಿಪರೀತ ಕುಡಿತದ ಚಟ ಹೊಂದಿದ್ದ ನಲ್ಲೂರು ಗ್ರಾಮದ ಬಾಬು ಗೌಡ (75)ಎಂಬವರು ಜೀವನದಲ್ಲಿ ಮನನೊಂದು ಜು.29ರಂದು ರಾತ್ರಿ ಮನೆ ಸಮೀಪದ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News