×
Ad

ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕರಿಗೆ ಅವಮಾನ: ಬಿಜೆಪಿ ಮುಖಂಡ ನವೀನ್ ನಾಯ್ಕ್ ವಿರುದ್ಧ ಪ್ರಕರಣ ದಾಖಲು

Update: 2024-08-18 16:36 IST

ಮಣಿಪಾಲ: ಪರಶುರಾಮ ಥೀಮ್ ಪಾರ್ಕ್‌ಗೆ ಸಂಬಂಧಿಸಿ ಡಿಸಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ನಿರೀಕ್ಷಕರಿಗೆ ಅವಮಾನ ಮಾಡಿದ ಆರೋಪದಡಿ ಬಿಜೆಪಿ ಕಾರ್ಕಲ ಮಂಡಲ ಅಧ್ಯಕ್ಷ ನವೀನ್ ನಾಯ್ಕ್ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿಷಯಕ್ಕೆ ಸಂಬಂಧಿಸಿ ಆ.5ರಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ನಡೆದ ಪ್ರತಿಭಟನೆಯಲ್ಲಿ ನವೀನ್ ನಾಯ್ಕ್, ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್. ಅವರಿಗೆ ಏಕವಚನದಲ್ಲಿ ಬೈದು ಅವಮಾನ ಮಾಡಿದ್ದರು.

ಅಲ್ಲದೆ ಆರೋಪಿಯು ಪೊಲೀಸ್ ನಿರೀಕ್ಷಕರು ಕಾನೂನು ಕೆಲಸ ಮಾಡುವುದನ್ನು ವಿಳಂಬಗೊಳಿಸಲು, ತೊಂದರೆ ನೀಡಲು ಹಾಗೂ ಅವರ ಕರ್ತವ್ಯವನ್ನು ನಿರ್ವಹಿಸಲು ಮಾನಸಿಕವಾಗಿ ಕುಗ್ಗುವಂತೆ ಮಾಡಿದ್ದಲ್ಲದೆ, ಅವರ ಮನಸ್ಸಿಗೆ ಘಾಸಿಯಾಗುವ ರೀತಿಯಲ್ಲಿ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ಬೈದಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್. ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News