ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್‌ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನ

Update: 2026-08-13 11:16 IST

ಶೈನಿ ಅಸ್ಮಾ ಸಲ್ಡಾನ 

ಕಾರ್ಕಳ : ತಾಲೂಕಿನ ಬೈಲೂರು ಗ್ರಾಮದ ಕೌಡೂರಿ ನಿವಾಸಿ ಶೈನಿ ಅಸ್ಮಾ ಸಲ್ಡಾನ ಅವರು ಪೈಲಟ್‌ ತರಬೇತಿ ಪೂರ್ಣಗೊಳಿಸಿ ಕಮರ್ಷಿಯಲ್‌ ಪೈಲಟ್‌ ಲೈಸೆನ್ಸ್‌ ಪಡೆದುಕೊಳ್ಳುವ ಮೂಲಕ ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಕೌಡೂರು ರಂಗನಪಲ್ಕೆಯ ಅಶೋಕ್‌ ಜಾಕೋಬ್‌ ಸಲ್ಡಾನ ಮತ್ತು ಮರಿಯಾ ಗ್ರೆಟ್ಟಾ ಸಲ್ಡಾನ ದಂಪತಿಯ ಪುತ್ರಿಯಾಗಿರುವ ಶೈನಿ ಅಸ್ಮಾ ಸಲ್ಡಾನ ಅವರು ಪಿಯುಸಿವರೆಗಿನ ಶಿಕ್ಷಣವನ್ನು ಕಾರ್ಕಳದ ಕ್ರೈಸ್ಟ್‌ಕಿಂಗ್‌ ವಿದ್ಯಾಸಂಸ್ಥೆಯಲ್ಲಿ ಪೂರ್ಣಗೊಳಿಸಿದ್ದಾರೆ. ಬಳಿಕ ಬೆಂಗಳೂರಿನಲ್ಲಿ ಇಂದಿರಾಗಾಂಧಿ ರಾಷ್ಟ್ರೀಯ ಉಡಾನ್‌ ಅಕಾಡೆಮಿಯ ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆಯಾದ ಅವರು, 2023ರ ಆಗಸ್ಟ್‌ನಿಂದ ಉತ್ತರ ಪ್ರದೇಶದ ಫುರ್ಸತ್‌ಗಂಜ್‌ನಲ್ಲಿರುವ ಇಂದಿರಾಗಾಂಧಿ ರಾಷ್ಟ್ರೀಯ ಉಡಾನ್‌ ಅಕಾಡೆಮಿಯಲ್ಲಿ ಪೈಲಟ್‌ ತರಬೇತಿ ಪಡೆದಿದ್ದಾರೆ.

ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅವರು ಇದೀಗ ಕಮರ್ಷಿಯಲ್‌ ಪೈಲಟ್‌ ಲೈಸೆನ್ಸ್‌ ಪಡೆದುಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News