×
Ad

ಶಿರೂರು ದೋಣಿ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2023-12-18 10:51 IST

ಸಾಂದರ್ಭಿಕ ಚಿತ್ರ

ಉಡುಪಿ, ಡಿ.18: ಬೈಂದೂರು ತಾಲೂಕಿನ ಶಿರೂರು ಸಮೀಪ ಅರಬ್ಬಿ ಸಮುದ್ರದಲ್ಲಿ ದೋಣಿ ಮಗುಚಿ ಇಬ್ಬರು ಮೀನುಗಾರರು ಮೃತಪಟ್ಟಿರುವುದಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಹೊಸದಿಲ್ಲಿ ಪ್ರವಾಸದಲ್ಲಿರುವ ಸಚಿವರು, ಘಟನೆ ಕುರಿತಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಮೃತರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳುವಂತೆ ಮತ್ತು ಆದಷ್ಟು ಬೇಗ ಸೂಕ್ತ ಪರಿಹಾರ ನೀಡಲು ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶಿರೂರು ಕಳಿಹಿತ್ಲು ಎಂಬಲ್ಲಿಂದ ಹೊರಟ ದೋಣಿ ರವಿವಾರ ತಡರಾತ್ರಿ ಅಲೆಗಳ ಅಬ್ಬರಕ್ಕೆ ಸಿಲುಕಿ ಸಮುದ್ರದಲ್ಲಿ ಮಗುಚಿದ ಪರಿಣಾಮ ಮೀನುಗಾರರಾದ ಶಿರೂರು ಮೂಲದ ಅಬ್ದುಲ್ ಸತ್ತಾರ್ (45) ಹಾಗೂ ಭಟ್ಕಳ ಮೂಲದ ಮುಹಮ್ಮದ್ ಯೂಸುಫ್ ನಿಸ್ಬಾ (49) ಮೃತಪಟ್ಟಿದ್ದಾರೆ. ಓರ್ವಾ ಪಾರಾಗಿದ್ದಾನೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News