×
Ad

ಶಿರ್ವ: ಸಿಡಿಲು ಬಡಿದು ಕಾಲೇಜು ವಿದ್ಯಾರ್ಥಿ ಮೃತ್ಯು

Update: 2024-05-24 11:22 IST

ಶಿರ್ವ, ಮೇ 24: ಸ್ನಾನಕ್ಕೆಂದು ತೆರಳಿದ್ದ ವೇಳೆ ಸಿಡಿಲಿನ ಆಘಾತಕ್ಕೆ ಕಾಲೇಜು ವಿದ್ಯಾರ್ಥಿಯೊಬ್ಬರು ಬಲಿಯಾದ ಘಟನೆ ಶಿರ್ವ ಸಮೀಪದ ಮಾಣಿಬೆಟ್ಟು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿ ಎಂಬವರ ಪುತ್ರ ರಕ್ಷಿತ್ ಪೂಜಾರಿ (20) ಎಂದು ಗುರುತಿಸಲಾಗಿದೆ. ಇವರು ಶಿರ್ವ ಎಂಎಸ್ಆರ್ ಎಸ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿಯಾಗಿದ್ದರು.

ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ಅವರನ್ನು ಮನೆ ಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಯ ವೇಳೆಗೆ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News