×
Ad

ಬಸ್ರಿ ಶಾಲೆ ಬೈಲೂರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಆಚಾರ್ಯ

Update: 2026-06-21 13:53 IST

ಕಾರ್ಕಳ : ಕಾರ್ಕಳ ತಾಲೂಕಿನ ಬೈಲೂರು ಬಸ್ರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪುನರ್‌ರಚನೆಯಾಗಿದ್ದು, ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಹಾಗೂ ಆರ್ಥಿಕ ಸಮಿತಿ ಅಧ್ಯಕ್ಷರಾಗಿ ನ್ಯಾಯವಾದಿ ಸದಾನಂದ ಸಾಲಿಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಪತ್ರಕರ್ತ ಹರೀಶ್ ಆಚಾರ್ಯ, ಕಾರ್ಯದರ್ಶಿಯಾಗಿ ಪೂರ್ಣಿಮಾ ಶೆಟ್ಟಿ ಆಯ್ಕೆಯಾಗಿದ್ದಾರೆ.

ಶಾಲಾ ಶೈಕ್ಷಣಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ಶಾಲಾ ಹಳೆ ವಿದ್ಯಾರ್ಥಿಗಳ ಸಭೆಯನ್ನು ಶಾಲೆಯಲ್ಲಿ ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ವಸಂತಿ ಹೆಚ್. ಜಿ., ಎಸ್.ಡಿ.ಎಂ.ಸಿ. ಅಧ್ಯಕ್ಷ ವಸಂತ ಕುಲಾಲ್ ಹಾಗೂ ಶಾಲಾ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News