Hebri | ಶಿವಪುರ ಗ್ರಾಪಂ ಸಿಬ್ಬಂದಿಯಿಂದ 4.54 ಲಕ್ಷ ರೂ. ವಂಚನೆ: ಪ್ರಕರಣ ದಾಖಲು

Update: 2026-08-14 15:23 IST

ಹೆಬ್ರಿ, ಆ.14: ಶಿವಪುರ ಗ್ರಾಮ ಪಂಚಾಯತ್ ಪಂಚಾಯತ್ ಬಿಲ್ ವಸೂಲಿಗಾರ ಮನೆ ತೆರಿಗೆಗೆ ಸಂಬಂಧಿಸಿದ ಲಕ್ಷಾಂತರ ರೂಪಾಯಿಯನ್ನು ದುರ್ಬಳಕೆ ಮಾಡಿ ಅವ್ಯವಹಾರ ಎಸಗಿರುವ ಬಗ್ಗೆ ವರದಿಯಾಗಿದೆ.

ಶಿವಪುರ ಗ್ರಾಪಂನ ಬಿಲ್ ವಸೂಲಿಗಾರ ಮಂಜುನಾಥ(40) ಎಂಬಾತ 2023-24ನೇ ಸಾಲಿನಲ್ಲಿ 1,18,367 ರೂ. ಹಾಗೂ 2024-25ರಲ್ಲಿ 3,36,021 ರೂ. ಮನೆ ತೆರಿಗೆಯಲ್ಲಿ ವಸೂಲಾದ ಒಟ್ಟು 4,54,388 ರೂ. ಪಂಚಾಯತ್ ಬ್ಯಾಂಕ್ ಖಾತೆಗೆ ಜಮಾ ಮಾಡದೆ ತನ್ನ ಸ್ವಂತಕ್ಕೆ ಬಳಸಿಕೊಂಡು ಹಣದ ದುರ್ಬಳಕೆ ಮಾಡಿಕೊಂಡು ಮೋಸ ಮಾಡಿರುವುದಾಗಿ ದೂರಲಾಗಿದೆ.

ಈ ಬಗ್ಗೆ ಶಿವಪುರ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ದಿ ಅಧಿಕಾರಿ ಅಶೋಕ್ ನೀಡಿರುವ ದೂರಿನಂತೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News