×
Ad

ಎಸ್ಐಆರ್ ಕರ್ನಾಟಕದ ನಾಗರಿಕರ ಹಕ್ಕು ರಕ್ಷಿಸಲು ರಾಜ್ಯ ಸರಕಾರ ಕ್ರಮ : ಕಾಂಗ್ರೆಸ್

Update: 2026-06-30 19:39 IST

ಉಡುಪಿ : ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) ಆರಂಭವಾದ ಹಿನ್ನಲೆಯಲ್ಲಿ ಅರ್ಹ ಮತದಾರರ ಹೆಸರು ಡಿಲೀಟ್ ಆಗದಂತೆ ತಡೆಯಲು ರಾಜ್ಯ ಸರಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಎಸ್ಐಆರ್ ನಲ್ಲಿ ಪುರಾವೆಯಾಗಿ ಕೇಳಲಾಗುವ ದಾಖಲೆಗಳಲ್ಲಿ ಒಂದಾದ ಶಾಶ್ವತ ನಿವಾಸ ಪ್ರಮಾಣಪತ್ರವನ್ನು ಅಗತ್ಯವಿರುವ ಎಲ್ಲ ಮತದಾರರಿಗೆ ಒದಗಿಸಲು ಆದೇಶಿಸಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ ರಾವ್ ಕಿದಿಯೂರು ತಿಳಿಸಿದ್ದಾರೆ.

ಶಾಶ್ವತ ನಿವಾಸ ಪ್ರಮಾಣಪತ್ರ ಸೇರಿದಂತೆ ವಿವಿಧ ಸರಕಾರಿ ಪ್ರಮಾಣಪತ್ರಗಳು ಮತ್ತು ನಾಗರಿಕ ಸೇವೆಗಳ ವಿತರಣೆಯನ್ನು ಸುಗಮ, ಪಾರದರ್ಶಕ ಹಾಗೂ ಕಾಲಮಿತಿಯೊಳಗೆ ಒದಗಿಸಬೇಕು ಎಂಬ ನಿಟ್ಟಿನಲ್ಲಿ ಶಾಶ್ವತ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸುವವರಿಗೆ ನೆರವು ನೀಡಲು ಪ್ರತಿ ಗ್ರಾಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಕಚೇರಿಗಳಲ್ಲಿ ಕಂಪ್ಯೂಟರ್, ಇಂಟರ್ನೆಟ್, ಮುದ್ರಣ ಹಾಗೂ ಸ್ಕ್ಯಾನಿಂಗ್ ಸೌಲಭ್ಯಗಳೊಂದಿಗೆ ಸಹಾಯ ಮತ್ತು ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಲು ಆದೇಶಿಸಲಾಗಿದೆ.

ಮತದಾನದ ಹಕ್ಕನ್ನು ಉಳಿಸಲು ಸರಕಾರದ ಹೊಸ ಆದೇಶ ಅನುಕೂಲವಾಗಿದ್ದು, ಮತದಾರರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News