×
Ad

ಎಸ್‌ಐಆರ್: ಗಣತಿ ನಮೂನೆ ವಿತರಣೆಯಲ್ಲಿ ಉಡುಪಿ ಜಿಲ್ಲೆ ಶೇ.97 ಸಾಧನೆ

Update: 2026-07-10 21:30 IST

ಉಡುಪಿ, ಜು.10: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ನಡೆದಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಐಆರ್-2026) ಪ್ರಕ್ರಿಯೆಯಲ್ಲಿ ಗಣತಿ ನಮೂನೆ (ಎನ್ಯೂಮರೇಶನ್ ಫಾರ್ಮ್)ಗಳನ್ನು ಮತದಾರರಿಗೆ ವಿತರಿಸುವ ಕಾರ್ಯ ಶುಕ್ರವಾರ ಸಂಜೆಯವರೆಗೆ ಶೇ.97ರಷ್ಟು ಪೂರ್ಣಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

ಜುಲೈ 9 ಶುಕ್ರವಾರ ಸಂಜೆಯವರೆಗೆ ಜಿಲ್ಲೆಯಲ್ಲಿ ವಿತರಿಸಬೇಕಾದ 10,63,876 ಎನ್ಯೂಮರೇಶನ್ ಫಾರ್ಮ್‌ಗಳಲ್ಲಿ 10,32,341 ಫಾರ್ಮ್ ಗಳನ್ನು ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ವಿತರಿಸಿ ದ್ದಾರೆ. ಇವರಲ್ಲಿ ಫಾರಂ ಭರ್ತಿ ಮಾಡಿದವರ ಪೈಕಿ 81,844 ಮಂದಿಯ (ಶೇ.7.7) ಗಣತಿ ನಮೂನೆಯನ್ನು ಡಿಜಿಟಲೀಕರಣ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 611 ಮಂದಿ ಮತದಾರರು ಮೃತಪಟ್ಟಿರುವುದು ಈವರೆಗಿನ ಮನೆ ಭೇಟಿಯ ವೇಳೆ ಗೊತ್ತಾಗಿದೆ. ಅದೇ ರೀತಿ 386ಮಂದಿ ಮತದಾರರು ಖಾಯಂ ಆಗಿ ಬೇರೆ ಕಡೆಗೆ ವರ್ಗಾವಣೆ ಗೊಂಡಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ 134 ಮಂದಿ ಮತದಾರರು ಆನ್‌ಲೈನ್ ಮೂಲಕ ಸ್ವ ದಾಖಲಾತಿ ಯನ್ನು ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಹೇಳಿಕೆ ತಿಳಿಸಿದೆ.

ಜಿಲ್ಲೆಯಲ್ಲಿ ಜು.10ರವರೆಗೆ ನಡೆದ ಎಸ್‌ಐಆರ್ ಪ್ರಕ್ರಿಯೆ ಸಾಧನೆ:

ವಿಧಾನಸಭಾಕ್ಷೇತ್ರ             ಒಟ್ಟು ಮತದಾರರು              ವಿತರಿಸಿದ ನಮೂನೆ

118.ಬೈಂದೂರು                 2,41,863                         2,39,286

119.ಕುಂದಾಪುರ                 2,12,473                         2,09,629

120.ಉಡುಪಿ                      2,21,680                           1,99,838

121.ಕಾಪು                         1,94,718                             1,92,709

122.ಕಾರ್ಕಳ                       1,93,142                             1,90,879

ಒಟ್ಟು                                  10,63,876                             10,32,341

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News