ವಿಕಲಚೇತನರ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ
ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟ ಸೇವೆ ಸಲ್ಲಿಸುತ್ತಿರುವ ಹಾಗೂ ಸಲ್ಲಿಸಿರುವ ವಿಶೇಷ ಶಿಕ್ಷಕರಿಗೂ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು, ಸಿ ಬ್ಲಾಕ್, ತಳಮಹಡಿ, ಜಿಲ್ಲಾ ಪಂಚಾಯತ್ ವಿಭಾಗ, ಜಿಲ್ಲಾಧಿ ಕಾರಿ ಕಛೇರಿ, ರಜತಾದ್ರಿ, ಮಣಿಪಾಲ, ದೂರವಾಣಿ: 0820-2574810, 2574811 ಅಥವಾ ಇಲಾಖೆಯ ವೆಬ್‌ಸೈಟ್ -www.dwdsc.kar.nic.in -ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.