×
Ad

ಬಡಗಬೆಟ್ಟು ಸೊಸೈಟಿಗೆ 8ನೇ ಬಾರಿಗೆ ರಾಜ್ಯ ಉತ್ತಮ ಸಹಕಾರ ಸಂಘ ಪ್ರಶಸ್ತಿ

Update: 2023-11-19 18:36 IST

ಉಡುಪಿ : ಮಂಗಳೂರಿನ ಊರ್ವ ಕ್ರಿಕೆಟ್ ಮೈದಾನದಲ್ಲಿ ಶನಿವಾರ ಜರಗಿದ ೭೦ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ೮ನೇ ಬಾರಿಗೆ ರಾಜ್ಯ ಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ ಲಭಿಸಿದೆ.

ಸಂಘದ ಅಧ್ಯಕ್ಷ ಸಂಜೀವ ಕಾಂಚನ್ ಗಣ್ಯರ ಸಮಕ್ಷಮ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ವೇದವ್ಯಾಸ ಕಾಮತ್, ಯಶ್‌ಪಾಲ್ ಸುವರ್ಣ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಉಡುಪಿ ಜಿಲ್ಲಾ ಸಹಕಾರ ಯೂನಿ ಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ದ.ಕ ಜಿಲ್ಲಾ ಸಹಕಾರ ಯೂನಿನನ್‌ನ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಕೆ.ಎಂ.ಎಫ್ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News