×
Ad

ಮನೋಜ ಕಡಬರಿಗೆ ರಾಜ್ಯಮಟ್ಟದ ಪ್ರಶಸ್ತಿ

Update: 2023-09-04 20:41 IST

ಮನೋಜ ಕಡಬ

ಉಡುಪಿ ಸೆ. 4: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿ ಮತ್ತು ಅಂಬಲಪಾಡಿಯ ಶ್ರೀಜನಾರ್ದನ ಮಹಾಕಾಳಿ ದೇವಸ್ಥಾನ ಸಮಿತಿಯ ಅಂಬಲಪಾಡಿ ಇವರ ಜಂಟಿ ಆಶ್ರಯದಲ್ಲಿ ನಾಳೆ ಸೆ.5ರಂದು ಅಂಬಲಪಾಡಿಯಲ್ಲಿ ನಡೆಯಲಿರುವ ಶಿಕ್ಷಕ ಸಾಹಿತಿಗಳ ಆರನೇಯ ಸಮ್ಮೇಳನ ದಲ್ಲಿ ಉಡುಪಿಯ ಶೆಫಿನ್ಸ್ ಇಂಗ್ಲಿಷ್ ಅಕಾಡೆಮಿಯ ನಿರ್ದೇಶಕ ಮತ್ತು ಸ್ಪೋಕನ್ ಇಂಗ್ಲಿಷ್ ತರಬೇತುದಾರ ಮನೋಜ್ ಕಡಬ ಇವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಮನೋಜ್ ಕಡಬ ಗ್ರಾಮೀಣ ಭಾಗದ ಮಕ್ಕಳಿಗೆ ಸ್ಪೋಕನ್ ಇಂಗ್ಲಿಷ್ ಕಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನವನ್ನು ಪ್ರಾರಂಭಿಸಿದ್ದರು. ಜಿಲ್ಲೆಯ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಮತ್ತು ಮಕ್ಕಳಿಗೆ ಅವರು ಸ್ಪೋಕನ್ ಇಂಗ್ಲೀಷ್ ತರಬೇತಿ ನೀಡುತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News