×
Ad

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್: ಪ್ರಾರ್ಥನಾ ಪೈ ಪ್ರಥಮ

Update: 2023-10-24 20:01 IST

ಗಂಗೊಳ್ಳಿ, ಅ.124: ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಇವರ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಜೈನ್ ಕ್ರೀಡಾ ಶಾಲೆಯಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮೈಸೂರು ವಿಭಾಗ ತಂಡವನ್ನು ಪ್ರತಿನಿಧಿಸಿದ್ದ ಗಂಗೊಳ್ಳಿಯ ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಪ್ರಾರ್ಥನಾ ಪೈ ಪ್ರಥಮ ಸ್ಥಾನ ಗಳಿಸಿದ್ದಾರೆ.

ಉಡುಪಿಯಲ್ಲಿ ಅ.16ರಂದು ನಡೆದ ಮೈಸೂರು ವಿಭಾಗದ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದಲ್ಲಿ ಮೈಸೂರು ವಿಭಾಗದ ತಂಡವನ್ನು ಪ್ರತಿನಿಧಿಸಿಸಲು ಇವರು ಆಯ್ಕೆಯಾಗಿದ್ದರು. ಈಕೆ ಗಂಗೊಳ್ಳಿಯ ಪತ್ರಕರ್ತ ಬಿ.ರಾಘವೇಂದ್ರ ಪೈ ಮತ್ತು ರಾಧಿಕಾ ಆರ್.ಪೈ ದಂಪತಿಯ ಪುತ್ರಿ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News