×
Ad

ತಿಂಗಳಲ್ಲಿ 4 ದಿನ ಉಡುಪಿಯಲ್ಲಿ ವಾಸ್ತವ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Update: 2023-09-22 20:51 IST

ಉಡುಪಿ, ಸೆ.22: ಇನ್ನು ಮುಂದೆ ತಿಂಗಳಲ್ಲಿ ನಾಲ್ಕು ದಿನ ಉಡುಪಿಯಲ್ಲಿ ವಾಸ್ತವ್ಯ ಹೂಡಲಿದ್ದು, ಜಿಲ್ಲೆಯ ಅಭಿವೃದ್ಧಿ ಬಗ್ಗೆ ಗಮನಹರಿಸುವುದರ ಜೊತೆಗೆ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರುಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಬರುತ್ತಿದ್ದು, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಬೇಕಾಗಿದೆ. ಪಕ್ಷದಲ್ಲಿರುವ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸಿ ಮುಂದಿನ ದಿನಗಳಲ್ಲಿ ಸಮರ್ಥವಾಗಿ ಪಕ್ಷವನ್ನು ಕಟ್ಟಬೇಕು ಎಂದರು.

ಉಡುಪಿ ಜಿಲ್ಲೆಯಲ್ಲಿ ಶೇ.95 ಮಂದಿ ರಾಜ್ಯ ಸರಕಾರದ 5 ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ಮಹಿಳೆ ಯರು ರಾಜ್ಯ ಸರಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸಿ ಇದರ ಲಾಭ ಸರಕಾರಕ್ಕೆ ಸಿಗುವಂತೆ ಮಾಡಬೇಕು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಮಿಥುನ್ ರೈ, ಎಂ.ಎ.ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News