×
Ad

ಯುವಜನತೆಯ ಪ್ರತಿಭಾ ಅನಾವರಣಕ್ಕೆ ಸೂಕ್ತ ವೇದಿಕೆ: ಶಾಸಕ ಯಶ್ಪಾಲ್

Update: 2023-11-18 20:31 IST

ಉಡುಪಿ, ನ.18: ಯುವ ಜನರು ತಮ್ಮಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಯುವ ಜನೋತ್ಸವ ಒಂದು ಉತ್ತಮ ವೇದಿಕೆ. ಇದನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಸಕ ಯಶ್‌ಪಾಲ್ ಸುವರ್ಣ ಕರೆ ನೀಡಿದ್ದಾರೆ.

ಶನಿವಾರ ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಲಯನ್ಸ್ ಅಮೃತ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯುವ ಜನೋತ್ಸವ ಕಾರ್ಯಕ್ರಮಗಳನ್ನು ಸರಕಾರ ಪ್ರತೀ ವರ್ಷವು ಆಯೋಜನೆಗೊಳಿಸುತ್ತಿದೆ. ಯುವ ಸಂಪತ್ತು ನಮ್ಮ ದೇಶದ ಸಂಪತ್ತು. ಯುವ ಜನತೆಗೆ ಸರಿಯಾದ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡಿದಾಗ ಅವರುಗಳನ್ನು ದೇಶದ ಆಸ್ತಿಯಾಗಿ ದೇಶದ ಅಭಿವೃದ್ಧಿಗೆ ಅವರನ್ನು ತೊಡಗಿಸಿಕೊಳ್ಳಬಹುದು ಎಂದರು.

ಲಯನ್ಸ್ ಅಮೃತ್ ಉಡುಪಿಯ ಅಧ್ಯಕ್ಷೆ ಭಾರತಿ ಹರೀಶ್, ಸದಸ್ಯ ಜಯ ಪ್ರಕಾಶ್ ಭಂಡಾರಿ, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಯುವ ಜನೋತ್ಸವದಲ್ಲಿ ಭಾಗವಹಿಸಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಜನಪದ ನೃತ್ಯ, ಜನಪದ ಹಾಡು, ಕಥೆ ಬರೆಯುವುದು, ಭಿತ್ತಿ ಪತ್ರ ತಯಾರಿಕೆ, ಘೋಷಣೆ ಹಾಗೂ ಛಾಯಾಚಿತ್ರ ಸ್ಪರ್ಧೆಗಳು ನಡೆದವು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News