×
Ad

ಕೂಲಿ ಕಾರ್ಮಿಕ ಅನುಮಾನಾಸ್ಪದ ಸಾವು: ಪ್ರಕರಣ ದಾಖಲು

Update: 2023-10-04 20:58 IST

ಉಡುಪಿ: ಗದಗ ಮೂಲದ ಕೂಲಿ ಕಾರ್ಮಿಕನೋರ್ವ ಕಡಿಯಾಳಿ ಯಲ್ಲಿ ಅ.3ರಂದು ಅನುಮಾನಾಸ್ಪದವಾಗಿ ಮೃತಪಟ್ಟ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರನ್ನು ಗದಗ ಜಿಲ್ಲೆಯ ಶೇಖರಪ್ಪ ಚಲವಾದಿ (43) ಎಂದು ಗುರುತಿಸಲಾಗಿದೆ. ಉಡುಪಿಯಲ್ಲಿ ಕೂಲಿ ಕೆಲಸ ಮಾಡಿ ಕೊಂಡಿದ್ದ ಇವರು, ಕಡಿಯಾಳಿ ಕಾಮತ್ ಕಂಪೌಂಡ್‌ನ ಗೀತಾ ಕಾಮತ್ ಎಂಬವರ ಮನೆಯಲ್ಲಿ ಹುಲ್ಲು ಕೆತ್ತುವ ಕೆಲಸ ಮಾಡುತ್ತಿದ್ದರು. ಈ ವೇಳೆ ಅವರು ಪೀಡ್ಸ್ ಬಂದವರ ರೀತಿ ತೀವ್ರ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖ ಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ವೇಳೆ ಮೃತಪಟ್ಟರೆಂದು ತಿಳಿದುಬಂದಿದೆ.

ಮೃತರ ಮರಣದಲ್ಲಿ ಸಂಶಯ ಇರುವುದಾಗಿ ಮೃತರ ಸಹೋದರ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News