×
Ad

ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಶಿಕ್ಷಕಿ ಗೀತಾ ಶೆಟ್ಟಿ ಆಯ್ಕೆ

Update: 2025-05-23 23:28 IST

ಉಡುಪಿ: ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಇತ್ತೀಚೆಗೆ ಜರಗಿದ ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದ 100 ಮೀಟರ್ ಮತ್ತು 200 ಮೀಟರ್ ಓಟದಲ್ಲಿ ವಡ್ಡರ್ಸೆ ಸರಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕಿ ಗೀತಾ ಆನಂದ ಶೆಟ್ಟಿ ಚಿನ್ನದ ಪದಕ ವಿಜೇತರಾಗಿ ಮೇಘಾಲಯದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಈವರೆಗೆ 13 ಬಾರಿ ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದು, ಹಲವಾರು ಬಹುಮಾನಗಳನ್ನು ಪಡೆದಿದ್ದು, 2025ರ ಫೆಬ್ರವರಿಯಲ್ಲಿ ಚಂಡಿಗಡದಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ. ಈಗ ದ್ವಿತೀಯ ಬಾರಿಗೆ ಮೇಘಾಲಯದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News