×
Ad

ಕೋಡಿ ಬ್ಯಾರೀಸ್ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Update: 2023-09-08 20:01 IST

ಕುಂದಾಪುರ : ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಗಳು ಸೆ.5ರಂದು ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು.

ಭಾಷಣ, ಕವಿತೆ, ನೃತ್ಯ, ಹಾಡು ಮುಂತಾದ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಶಿಕ್ಷಕರಿಗೆ ತಮ್ಮ ಕೃತಜ್ಞತೆ ಮತ್ತು ಗೌರವವನ್ನು ವಿದ್ಯಾರ್ಥಿಗಳು ಸಲ್ಲಿಸಿದರು. ಅಲ್ಲದೆ ಶಿಕ್ಷಕರ ಮನರಂಜನೆಗಾಗಿ ಮೋಜಿನ ಆಟಗಳನ್ನು ಏರ್ಪಡಿಸಲಾಗಿತ್ತು.

ಬ್ಯಾರೀಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ.ಎಂ.ಅಬ್ದುಲ್ ರೆಹಮಾನ್ ಮಾತನಾಡಿ, ಶಿಕ್ಷಕರು ಸಮಾಜದ ಆಧಾರ ಸ್ತಂಭಗಳಾಗಿದ್ದು ಅವರ ಕೃತಜ್ಞತೆ ಯಿಲ್ಲದ ಕೆಲಸಕ್ಕಾಗಿ ಪ್ರತಿದಿನ ಅವರನ್ನು ಗೌರವಿಸಬೇಕು ಎಂದು ಹೇಳಿದರು.

ಟ್ರಸ್ಟಿ ಡಾ.ಆಸೀಫ್ ಬ್ಯಾರಿ, ಸಂಯೋಜಕ ಪ್ರೊ.ಆಕಾಶ್ ಶುಭ ಹಾರೈಸಿದರು. ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಆಯೋಜಿಸಿದ್ದರು. ವಿದ್ಯಾರ್ಥಿ ಮೊಹಮ್ಮದ್ ಯೂನಸ್ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News