×
Ad

ಉದ್ಯಾವರದಲ್ಲಿ ಶಿಕ್ಷಕ ದಿನಾಚರಣೆ

Update: 2024-09-05 19:14 IST

ಉಡುಪಿ, ಸೆ.5: ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ-ರಕ್ಷಕ ಸಂಘದ ವತಿಯಿಂದ ಇಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗಿದ್ದು, ಶಾಲಾ ಶಿಕ್ಷಕರಿಗಾಗಿ ವಿವಿಧ ಒಳಾಂಗಣಾ ಕ್ರೀಡೆ ಹಾಗೂ ಸಾಮಾನ್ಯ ರಸಪ್ರಶ್ನಾ ಸ್ಪರ್ಧೆಯನ್ನು ನಡೆಸಲಾಯಿತು.

ಶಾಲಾ ಸಂಚಾಲಕ ಸುರೇಶ್ ಶೆಣೈ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಆಡಳಿತ ಮಂಡಳಿಯ ಅಧ್ಯಕ್ಷ ಗಣಪತಿ ಕಾರಂತ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಶಾಲಾಡಳಿತ ಮಂಡಳಿಯ ಸದಸ್ಯರಾದ ಕೃಷ್ಣಕುಮಾರ್ ರಾವ್ ಮಟ್ಟು, ಡಾ. ತ್ರಿವೇಣಿ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಸುಜಾತಾ, ಉಪಾಧ್ಯಕ್ಷ ರವಿಕಿರಣ್ ಪಾಠಕ್, ನಿವೃತ್ತ ಮುಖ್ಯ ಶಿಕ್ಷಕಿ ಹೇಮಲತಾ, ಶಾಲಾ ಮುಖ್ಯ ಶಿಕ್ಷಕಿ ರತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲೆಯ ಎಲ್ಲ ಶಿಕ್ಷಕವೃಂದವನ್ನು ಶಾಲು ಹಾರ, ಸ್ಮರಣಿಕೆ, ಫಲಪುಷ್ಪ ನೀಡಿ ಗೌರವಿಸಲಾಯಿತು. ಶಾಲಾ ವಿದ್ಯಾರ್ಥಿಗಳ ಕ್ರೀಡಾ ತರಬೇತುದಾರ ರವಿಕುಮಾರ್, ಅಕ್ಷರ ದಾಸೋಹ ಸಿಬ್ಬಂದಿಗಳು, ಶಾಲಾ ವಾಹನ ಚಾಲಕರನ್ನೂ ಗುರುತಿಸಿ ಅಭಿನಂದಿಸಲಾಯಿತು.

ಶಿಕ್ಷಕ-ರಕ್ಷಕ ಸಂಘದ ನಿಕಟ ಪೂರ್ವಾಧ್ಯಕ್ಷೆ ಸಂಧ್ಯಾವಾಸು ಸ್ವಾಗತಿಸಿದರು. ನಿರ್ದೇಶಕಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News