×
Ad

ಕಾರ್ಕಳ ಪುರಸಭಾ ವ್ಯಾಪ್ತಿಯ ಹವಾಲ್ದಾರ್ ಬೆಟ್ಟು ಹಿರಿಯಂಗಡಿ ರಸ್ತೆಯ ಅವ್ಯವಸ್ಥೆ ಗ್ರಾಮಸ್ಥರ ಆಕ್ರೋಶ

Update: 2023-12-30 15:02 IST

ಕಾರ್ಕಳ : ಕಾರ್ಕಳ ಪುರಸಭಾ ವ್ಯಾಪ್ತಿಯ ಹವಾಲ್ದಾರ್ ಬೆಟ್ಟು ಹಿರಿಯಂಗಡಿ ಕೂಡು ರಸ್ತೆಯು ತೀರಾ ನಾದುರಸ್ತಿಯಲ್ಲಿದ್ದು, ವಾಹನ ಸಂಚಾರಕ್ಕೆ ಹಾಗೂ ನಡೆದುಕೊಂಡು ಹೋಗುವ ಪಾದಚಾರಿಗಳಿಗೆ ಹಾಗೂ ದ್ವಿಚಕ್ರವಾಹನಗಾರರಿಗೆ ಸಂಚಾರಕ್ಕೆ ತೊಂದರೆಯಾಗುತ್ತಿದೆ.

ರಸ್ತೆ ಸಂಪೂರ್ಣ ಧೂಳಿನಿಂದ ಕೂಡಿದ್ದು ಅದಲ್ಲದೆ ಬದಿಯಲ್ಲಿ ಚರಂಡಿ ವ್ಯವಸ್ಥೆಯು ಅಸಮರ್ಪಕ ವಾಗಿದೆ. ರಸ್ತೆ ಬದಿ ಮನೆಗಳು ಕೂಡ ಧೂಳುಮಯವಾಗಿದ್ದು ಜನರು ಧೂಳನ್ನು ಸೇವಿಸಿಕೊಂಡು ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರ್ವಜನಿಕರ ಕಷ್ಟವನ್ನು ಸಂಬಂಧಪಟ್ಟ ಇಲಾಖೆ ಕೂಡಲೇ ಗಮನ ಹರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಕಾರ್ಯಕರ್ತ ದಯಾನಂದ್ ಪೈ ಮಾಧ್ಯಮದೊಂದಿಗೆ ರಸ್ತೆಯ ಸಮಸ್ಯೆಯನ್ನು ಬಗೆಹರಿಸುವಂತೆ ಪುರಸಭಾ ಆಡಳಿತವನ್ನು ವಿನಂತಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News