ಉಡುಪಿ, ನ.25: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಡಾ.ಶಿವರಾಮ ಕಾರಂತ ಟ್ರಸ್ಟ್, ಉಡುಪಿ ಜಿಲ್ಲೆ ವತಿಯಿಂದ ಸೋಮವಾರ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಮತ್ತು ಸಂವಿಧಾನ ದಿನಾಚರಣೆ ಅಂಗವಾಗಿ ಅರಿವಿನ ಬೆಳಕು ಉಪನ್ಯಾಸ ಮಾಲೆ-21 ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗರಾಜ ಮಾತನಾಡಿ, ಜಾತಿ ಮತಗಳ ಸಂಕೋಲೆಯನ್ನು ಮೀರಿ ಶಾಂತಿಯುತ ಸಮಾನತೆಯ ಬದುಕನ್ನು ಕಟ್ಟಿಕೊಳ್ಳಲು ಸಂವಿಧಾನವು ಪ್ರಮುಖ ಕಾರಣ. ಇಂತಹ ಸಂವಿಧಾನವನ್ನು ಪಡೆದಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕಾರಂತರ ಬರಹಗಳು ಮತ್ತು ಸಾಂಧಾನಿಕ ಮೌಲ್ಯಗಳು ಎಂಬ ವಿಷಯದ ಕುರಿತು ಉಪನ್ಯಾಸಕಿ ಮತ್ತು ಸಾಹಿತಿ ವಾಸಂತಿ ಅಂಬಲಪಾಡಿ ಮಾತನಾಡಿ, ಮಕ್ಕಳಿಗಾಗಿ ಅನೇಕ ಕೃತಿಗಳನ್ನು ಬರೆದ ಕಾರಂತರು ಬಾಲವನವನ್ನು ಕಟ್ಟಿ ಅದರ ಮೂಲಕ ಮಕ್ಕಳಿಗೆ ಜ್ಞಾನ ಪ್ರಪಂಚವನ್ನು ಪರಿಚುಸಿದರು. ಕಾರಂತರ ಕಾದಂಬರಿಗಳು ಸಂಧಾನಿಕ ಮೌಲ್ಯಗಳನ್ನು ತಿಳಿಸುತ್ತದೆ. ಇಂದಿನ ಯುವ ಪೀಳಿಗೆಯಲ್ಲಿ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದರು.

ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಅಧ್ಯಕ್ಷತೆ ವಸಿದ್ದರು. ಕಾಲೇಜಿನ ಉಪನ್ಯಾಸಕ ಪರಮೇಶ್ವರ ಮೋಗರ ಉಪಸ್ಥಿತರಿದ್ದರು. ನಿವೃತ್ತ ಉಪನ್ಯಾಸಕ ದಯಾನಂದ ಡಿ ಸ್ವಾಗತಿಸಿ, ಟ್ರಸ್ಟಿನ ಸದಸ್ಯ ಸತೀಶ್ ಕೊಡುವೂರು ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor