ಮುಂದುವರೆದ ಕೊರಗ ಅಹೋರಾತ್ರಿ ಧರಣಿ
ಉಡುಪಿ, ನ.21: ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಕಲ್ಪಿಸು ವಂತೆ ಆಗ್ರಹಿಸಿ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳ ನೇತೃತ್ವದಲ್ಲಿ ಉಡುಪಿ ಡಿಸಿ ಕಚೇರಿ ಎದುರು ಹಮ್ಮಿಕೊಳ್ಳಲಾಗಿರುವ ಅನಿಧಿಷ್ಠಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ರವಿವಾರವೂ ಮುಂದುವರೆದಿದೆ.
ರಾತ್ರಿ ಹಗಲು ಎನ್ನದೆ ಕಳೆದ ಏಳು ದಿನಗಳಿಂದ ತಮ್ಮ ಬೇಡಿಕೆ ಈಡೇರಿ ಸುವಂತೆ ಕೊರಗ ಸಮುದಾಯದವರು ಧರಣಿ ನಡೆಸುತ್ತಿದ್ದಾರೆ. ಈ ಚಳಿಯಲ್ಲೂ ಮನೆಮಂದಿ ಮಕ್ಕಳು ಧರಣಿ ಸ್ಥಳದಲ್ಲಿ ಕುಳಿತು ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸುತ್ತಿದ್ದಾರೆ. ಸಮುದಾಯದ ಪ್ರತಿಭಾವಂತ ಯುವ ಜನತೆಗೆ ಸರಕಾರಿ ಉದ್ಯೋಗ ನೇರ ನೇಮಕಾತಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಆದೇಶ ಹೊರಡಿಸುವವರೆಗೆ ಧರಣಿ ಮುಂದುವರೆಸಲಾಗುವುದು ಎಂದು ಧರಣಿ ನಿರತರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳ ಅಧ್ಯಕ್ಷೆ ಸುಶೀಲ ನಾಡ, ಮುಖಂಡ ರಾದ ಶೇಖರ ಕೆಂಜೂರು, ಕುಮಾರ ಕೆಂಜೂರು, ಪುತ್ರನ್ ಹೆಬ್ರಿ ಮೊದಲಾದವರು ಉಪಸ್ಥಿತರಿದ್ದರು.