×
Ad

ಯುವತಿ ನಾಪತ್ತೆ

Update: 2026-02-10 20:15 IST

ಉಡುಪಿ, ಫೆ.10: ಬೈಂದೂರು ತಾಲೂಕು ಕಿರಿಮಂಜೇಶ್ವರದ ಬಾಡಿಗೆ ಮನೆಯೊಂದರಲ್ಲಿ ಗಂಡ ಹಾಗೂ ಮಕ್ಕಳೊಂದಿಗೆ ವಾಸವಿದ್ದ ಮಲ್ಲಿಕಾ (31) ಎಂಬ ಯುವತಿ ಫೆಬ್ರವರಿ 5ರಂದು ಅಪರಾಹ್ನ 3 ಗಂಟೆಯ ಸುಮಾರಿಗೆ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು, ಈವರೆಗೂ ವಾಪಾಸು ಮನೆಗೂ ಬಾರದೇ ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ.

5 ಅಡಿ 3 ಇಂಚು ಎತ್ತರ, ಕೋಲು ಮುಖ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ ದೂ.ಸಂಖ್ಯೆ: 0820- 2526444ನ್ನು ಸಂಪರ್ಕಿಸಬಹುದು ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News