×
Ad

ಉಡುಪಿ ಸರಕಾರಿ ವಸತಿ ಸಮುಚ್ಚಯದಲ್ಲಿ ಮತ್ತೆ ಕಳ್ಳತನ: 9 ತಿಂಗಳ ಅಂತರದಲ್ಲಿ ಎರಡನೇ ಬಾರಿ ಕೃತ್ಯ

Update: 2025-07-20 11:28 IST

ಉಡುಪಿ: ಉಡುಪಿ ನಗರದ ಮಿಷನ್ ಕಾಂಪೌಂಡ್ ಬಳಿ ಇರುವ ಸರಕಾರಿ ವಸತಿ ಸಮುಚ್ಚಯದ ಮನೆಗಳಿಗೆ ಜು.19ರಂದು ರಾತ್ರಿ ವೇಳೆ ನುಗ್ಗಿರುವ ಕಳ್ಳರು ಅಪಾರ ವೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ಕಂದಾಯ ಇಲಾಖೆಗೆ ಸಂಬಂಧಿಸಿದ ಇದೇ ವಸತಿ ಸಮುಚ್ಚಯದ ಆರು ಮನೆಗಳಿಗೆ ಕಳೆದ ವರ್ಷದ ಸೆ.29ರಂದು ಕಳ್ಳರು ನುಗ್ಗಿ ಲಕ್ಷಾಂತರ ರೂ. ವೌಲ್ಯದ ನಗ-ನಗದು ಕಳವು ಮಾಡಿ ಪರಾರಿಯಾಗಿದ್ದರು. ಉಡುಪಿ ನಗರ ಠಾಣೆಯಿಂದ ಅನತಿ ದೂರದಲ್ಲಿರುವ ಈ ವಸತಿ ಸಮುಚ್ಚಯದಲ್ಲಿ ಒಂಭತ್ತು ತಿಂಗಳ ಅಂತರದಲ್ಲಿ ಇದೀಗ ಮತ್ತೆ ಕಳ್ಳತನ ಆಗಿದೆ. ಈ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಈವರೆಗೆ ಯಾವುದೇ ಆರೋಪಿಗಳನ್ನು ಬಂಧಿಸಿಲ್ಲ. ಈ ಮಧ್ಯೆ ಮತ್ತೆ ಕಳ್ಳತನ ನಡೆದಿರುವುದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ.

ಇದೀಗ ಇಲ್ಲಿನ ವಸತಿ ಸಮುಚ್ಚಯದ ಮೂರು ಮನೆಗಳಿಗೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ಮೂಲಗಳು ತಿಳಿಸಿವೆ.

ಕಳ್ಳರು ಆಗಮಿಸುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಉಡುಪಿ ನಗರ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News