×
Ad

ಮರವಂತೆ ಅಂಚೆ ಕಚೇರಿಯಲ್ಲಿ ಕಳ್ಳತನ ಪ್ರಕರಣ: ಇಬ್ಬರ ಬಂಧನ

Update: 2024-09-03 21:15 IST

ಗಂಗೊಳ್ಳಿ, ಸೆ.3: ಮರವಂತೆ ಅಂಚೆ ಕಛೇರಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಅಪ್ರಾಪ್ತ ಬಾಲಕ ಸಹಿತ ಇಬ್ಬರು ಆರೋಪಿಗಳನ್ನು ಗಂಗೊಳ್ಳಿ ಪೊಲೀಸರು ಭಟ್ಕಳ ಜಾಲಿ ರಸ್ತೆ ಕ್ರಾಸ್ ಎಂಬಲ್ಲಿ ಸೆ.3ರಂದು ಬಂಧಿಸಿದ್ದಾರೆ.

ಬಂಧಿತರನ್ನು ಭಟ್ಕಳದ ಫೌಜಾನ್ ಅಹಮ್ಮದ್(19) ಹಾಗೂ ಇನ್ನೊರ್ವ ಕಾನೂನು ಸಂಘರ್ಷಕ್ಕೋಳಗಾದ ಬಾಲಕ ಎಂದು ಗುರುತಿಸಲಾಗಿದೆ. ಆರೋಪಿ ಕೃತ್ಯಕ್ಕೆ ಬಳಸಿದ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಗಂಗೊಳ್ಳಿ ಪೊಲೀಸ್ ಠಾಣಾ ಎಸ್ಸೈಗಳಾದ ಹರೀಶ್ ಆರ್. ಮತ್ತು ಬಸವರಾಜ ಕನಶೆಟ್ಟಿ ಹಾಗೂ ಸಿಬ್ಬಂದಿ ಸಂದೀಪ ಕುರಾಣಿ, ರಾಜು ನಾಯ್ಕ, ನಾಗರಾಜ, ದಿನೇಶ್ ತಂಡ ಸಿ.ಸಿ ಕ್ಯಾಮರಾದ ಪೂಟೇಜ್‌ನ ಆಧಾರದ ಮೇಲೆ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News